ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ಕೌನ್ಸೆಲಿಂಗ್ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 2 ರಿಂದ 27 ರವರೆಗೆ ದಾಖಲೆಗಳ ಪರಿಶೀಲನೆ ನಡೆಸಲಾಗುವುದು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟಿ ಬಿಡುಗಡೆ ಮಾಡಿದ್ದು ಆನ್ಲೈನಲ್ಲೇ ದಾಖಲಾತಿ ಪರಿಶೀಲನೆ ನಡೆಸಲಾಗುವುದು. ರ್ಯಾಂಕ್ ಆಧಾರದಲ್ಲಿ ದಿನಾಂಕ ನಿಗದಿ ಮಾಡಿ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಲಾಗಿದೆ.
ಅಭ್ಯರ್ಥಿಗಳು ವೇಳಾಪಟ್ಟಿಯ ಅನುಸಾರ ಪ್ರಾಧಿಕಾರದ ವೆಬ್ಸೈಟ್ ನಲ್ಲಿ ನೀಡಿರುವ ಲಿಂಖ್ ಕ್ಲಿಕ್ ಮಾಡಿ ದಾಖಲೆಗಳನ್ನು ಅಪ್ಲೋಡ್ ಮಾಡಬೇಕಿದೆ. ಆನ್ಲೈನ್ ನಲ್ಲಿ ದಾಖಲೆಗಳ ಸಲ್ಲಿಕೆ, ಪರಿಶೀಲನೆ ನಡೆಯಲಿದ್ದು ಪರೀಕ್ಷಾ ಪ್ರಾಧಿಕಾರಕ್ಕೆ ಹೋಗುವ ಅಗತ್ಯವಿರುವುದಿಲ್ಲ. ಮಾಹಿತಿಗೆ http://kea.kar.nic.in ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.