ನವದೆಹಲಿ: ಕರ್ನಾಟಕ ಸಿಂಗಂ ಖ್ಯಾತಿಯ ನಿವೃತ್ತ ಪೊಲೀಸ್ ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅಣ್ಣಾಮಲೈ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ರಾಜ್ಯದಲ್ಲಿ ಡಿಸಿಪಿ ಮತ್ತು ಅನೇಕ ಜಿಲ್ಲೆಗಳಲ್ಲಿ ಪೊಲೀಸ್ ಅಧೀಕ್ಷಕರಾಗಿ ಕಾರ್ಯನಿರ್ವಹಿಸಿದ್ದರು.
ಸ್ವಯಂನಿವೃತ್ತಿ ಪಡೆದುಕೊಂಡಿದ್ದ ಅವರು, ಬಿಜೆಪಿ ಸೇರಲಿದ್ದಾರೆ. ಬಿಜೆಪಿ ರಾಷ್ಟ್ರೀಯವಾದಿ ಪಕ್ಷವಾಗಿದೆ. ನಾನು ರಾಷ್ಟ್ರೀಯವಾದಿಯಾಗಿದ್ದೇನೆ ಎಂದು ಹೇಳಿದ್ದಾರೆ. ತಮಿಳುನಾಡಿನಲ್ಲಿ ಪಕ್ಷ ಸಂಘಟನೆ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.