ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅವರಿಗೆ ಕರೆ ಮಾಡಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಗ್ಯ ವಿಚಾರಿಸಿದ್ದಾರೆ. ಆಸ್ಪತ್ರೆಯಲ್ಲಿರುವ ಡಿ.ಕೆ. ಶಿವಕುಮಾರ್ ಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ನಾಯಕರು ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.
ಡಿ.ಕೆ. ಶಿವಕುಮಾರ್ ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಅವರ ಕುಟುಂಬ ಸದಸ್ಯರಿಗೂ ಕೋವಿಡ್ ಪರೀಕ್ಷೆ ನಡೆಸಲಾಗಿದೆ ಎಂದು ಹೇಳಲಾಗಿದೆ.