ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಕೋಮಾಕ್ಕೆ ಹೋಗಿದ್ದಾರೆ. ಅವರಿಗೆ ನಿರಂತರವಾಗಿ ವೆಂಟಿಲೇಟರ್ ಬೆಂಬಲ ನೀಡಲಾಗ್ತಿದೆ. ಕಳೆದ 16 ದಿನಗಳಿಂದ ಆಸ್ಪತ್ರೆಯಲ್ಲಿರುವ ಪ್ರಣಬ್ ಮುಖರ್ಜಿಗೆ ಮೆದುಳಿನ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಇದಾದ ನಂತರ ಅವರ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎಂದು ಸೇನಾ ಸಂಶೋಧನೆ ಮತ್ತು ರೆಫರಲ್ ಆಸ್ಪತ್ರೆ ಹೇಳಿದೆ.
ಶ್ವಾಸಕೋಶದ ಸೋಂಕು ಕಡಿಮೆಯಾಗಿಲ್ಲ. ನಿನ್ನೆಯಿಂದ ಮೂತ್ರಪಿಂಡ ಸರಿಯಾಗಿ ಕೆಲಸ ಮಾಡ್ತಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಆಗಸ್ಟ್ 10ರಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅದೇ ದಿನ ಕೋವಿಡ್ – 19 ಪರೀಕ್ಷೆ ಮಾಡಲಾಗಿತ್ತು. ಪರೀಕ್ಷೆಯಲ್ಲಿ ಕೊರೊನಾ ಇರುವುದು ದೃಢಪಟ್ಟಿತ್ತು. ಅಲ್ಲಿಂದ ಅವ್ರಿಗೆ ಚಿಕಿತ್ಸೆ ನಡೆಯುತ್ತಿದೆ. ಆದ್ರೆ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡಿಲ್ಲ.