ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪ ವರ್ಗೀಕರಣ ಕುರಿತಂತೆ ಸುಪ್ರೀಂಕೋರ್ಟ್ ಮಹತ್ವದ ಸೂಚನೆ ನೀಡಿದೆ.
ಉಪ ವರ್ಗೀಕರಣ ಮತ್ತಷ್ಟು ಕೈಗೊಳ್ಳುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇಲ್ಲ ಎನ್ನುವ ತೀರ್ಪನ್ನು ಮರುಪರಿಶೀಲಿಸಬೇಕೆಂದು ಅಗತ್ಯವಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕೆ ಮೀಸಲಾತಿ ಕಲ್ಪಿಸುವ ಕುರಿತಾಗಿ 2004ರಲ್ಲಿ ಸಂವಿಧಾನ ಪೀಠ ಈ ಕುರಿತಾಗಿ ತೀರ್ಪು ನೀಡಿದ್ದು ಈಗ ತೀರ್ಪನ್ನು ಮರು ಪರಿಶೀಲಿಸುವ ಅಗತ್ಯವಿದೆ ಎಂದು ಹೇಳಲಾಗಿದೆ.
ನ್ಯಾಯಮೂರ್ತಿ ಅರುಣ್ ಮಿಶ್ರಾ ನೇತೃತ್ವದ ಪೀಠದಲ್ಲಿ ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ವಿನೀತ್ ಶರಣ್, ಎಂ.ಆರ್. ಶಾ, ಅನಿರುದ್ಧ ಬೋಸ್ ಅವರಿದ್ದ ಪೀಠ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಉಪ ವರ್ಗೀಕರಣವನ್ನು ಕೈಗೊಳ್ಳಲು ರಾಜ್ಯ ಸರ್ಕಾರಗಳು ಕಾನೂನು ರೂಪಿಸಿಕೊಳ್ಳಬಹುದು. ಈ ಬಗ್ಗೆ ಮುಂದಿನ ನಿರ್ದೇಶನಕ್ಕಾಗಿ ಪರಿಶೀಲನೆ ನಡೆಸಲು ಮುಖ್ಯನ್ಯಾಯಮೂರ್ತಿಗಳ ಮುಂದೆ ಈ ವಿಷಯವನ್ನು ಮಂಡಿಸಬೇಕೆಂದು ತಿಳಿಸಲಾಗಿದೆ.
ಪಂಜಾಬ್ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪ ವರ್ಗೀಕರಣ ಮಾಡಲು ಸರ್ಕಾರಕ್ಕೆ ಅಧಿಕಾರ ನೀಡುವ ಕಾನೂನನ್ನು ರದ್ದು ಪಡಿಸಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆಯಲ್ಲಿ ಸುಪ್ರೀಂಕೋರ್ಟ್ ಈ ರೀತಿ ಅಭಿಪ್ರಾಯಪಟ್ಟಿದೆ.