ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಸುನಾಮಿ ಸೃಷ್ಠಿಸಿದ್ದು ಮೊದಲ ಬಾರಿಗೆ ಒಂದೇ ದಿನ 9 ಸಾವಿರಕ್ಕೂ ಅಧಿಕ ಹೊಸ ಪ್ರಕರಣ ದಾಖಲಾಗಿವೆ.
ರಾಜ್ಯದಲ್ಲಿ ಇವತ್ತು ಒಂದೇ ದಿನ 9386 ಜನರಿಗೆ ಸೋಂಕು ತಗುಲಿರುವುದು ಧೃಡಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,09,792 ಕ್ಕೆ ಏರಿಕೆಯಾಗಿದೆ. ಇವತ್ತು 7866 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 2,19,554 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇವತ್ತು ರಾಜ್ಯದಲ್ಲಿ 141 ಮಂದಿ ಸೋಂಕಿತರು ಸಾವನ್ನಪ್ಪಿದ್ದು ಇದುವರೆಗೆ 5232 ಜನ ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಇಂದು 3357 ಜನರಿಗೆ ಸೋಂಕು ತಗುಲಿದೆ. 3362 ಜನ ಡಿಸ್ಚಾರ್ಜ್ ಆಗಿದ್ದಾರೆ. 35,989 ಸಕ್ರಿಯ ಪ್ರಕರಣಗಳಿದ್ದು, ಇವತ್ತು ಬೆಂಗಳೂರಿನಲ್ಲಿ 59 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.