ಬೆಳಗಾವಿ ತಾಲೂಕಿನ ಪೀರನವಾಡಿಯಲ್ಲಿ ಪ್ರತಿಮೆ ವಿಚಾರಕ್ಕೆ ಸಂಬಂಧಿಸಿದಂತೆ ಉದ್ವಿಗ್ನ ಸ್ಥಿತಿ ಉಂಟಾಗಿದ್ದು ಎರಡು ಗುಂಪುಗಳ ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
ಪೀರನವಾಡಿಯಲ್ಲಿ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪಿಸಲಾಗಿದೆ. ಇದನ್ನು ಮರಾಠಿ ಭಾಷಿಕರು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಮುಂದಾಗಿದ್ದಾರೆ.
ಸಂಗೊಳ್ಳಿ ರಾಯಣ್ಣ ಧ್ವಜ ಹಿಡಿದು ಬಂದವರಿಗೆ ಮತ್ತು ಪ್ರತಿಮೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದವರ ಮನವೊಲಿಸಲು ಪೊಲೀಸರು ಪ್ರಯತ್ನ ನಡೆಸಿದ್ದಾರೆ. ಆದರೆ, ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಲಾಠಿಚಾರ್ಜ್ ಮಾಡಿ ಗುಂಪುಗಳನ್ನು ಚದುರಿಸಲಾಗಿದೆ.