ಕೊರೊನಾ ಕಾರಣಕ್ಕೆ ಚುನಾವಣೆ ಮುಂದೂಡಲು ಸಾಧ್ಯವಿಲ್ಲವೆಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಕೊರೊನಾ ಹಿನ್ನಲೆಯಲ್ಲಿ ಬಿಹಾರ್ ಚುನಾವಣೆ ಮುಂದೂಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ. ಇಂಥ ಪರಿಸ್ಥಿತಿಯಲ್ಲಿ ಏನು ಮಾಡಬೇಕೆಂದು ಚುನಾವಣಾ ಆಯೋಗಕ್ಕೆ ಕೇಳಲು ಸಾಧ್ಯವಿಲ್ಲವೆಂದು ಸುಪ್ರೀಂ ಹೇಳಿದೆ.
ಚುನಾವಣೆ ಅಧಿಸೂಚನೆ ರದ್ದುಗೊಳಿಸುವಂತೆ ಅರ್ಜಿದಾರರು ವಾದಿಸಿದ್ದರು. ಚುನಾವಣೆ ನಡೆಸದಂತೆ ನಾವು ಚುನಾವಣಾ ಆಯೋಗಕ್ಕೆ ಹೇಳಲು ಸಾಧ್ಯವಿಲ್ಲವೆಂದು ಸುಪ್ರೀಂ ಕೋರ್ಟ್ ಹೇಳಿದೆ. ಕಾಯ್ದೆ ಪ್ರಕಾರ ಪ್ರತಿಕೂಲ ಪರಿಸ್ಥಿತಿಯಲ್ಲಿ ಚುನಾವಣೆ ಮುಂದೂಡಬಹುದು ಎಂದು ಅರ್ಜಿದಾರರು ವಾದ ಮಂಡಿಸಿದರು. ಆದ್ರೆ ಚುನಾವಣೆಯನ್ನು ನಡೆಸದಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಪುನರುಚ್ಚರಿಸಿತು.
ಅರ್ಜಿ ಬಗ್ಗೆ ಯಾವುದೇ ವಿಚಾರಣೆ ಮಾಡಲು ಸಾಧ್ಯವಿಲ್ಲ. ಚುನಾವಣೆ ದಿನಾಂಕ ಇನ್ನೂ ಘೋಷಣೆಯಾಗಿಲ್ಲ. ಅಧಿಸೂಚನೆ ಜಾರಿಗೆ ಮೊದಲೇ ಅರ್ಜಿ ಬಗ್ಗೆ ಪುನರ್ ವಿಚಾರ ಸಾಧ್ಯವಿಲ್ಲವೆಂದ ಕೋರ್ಟ್ ಅರ್ಜಿ ವಜಾ ಮಾಡಿದೆ.