ನವದೆಹಲಿ: ಕೇಂದ್ರ ಸರ್ಕಾರ ಒನ್ ನೇಷನ್ ಒನ್ ಎಲೆಕ್ಷನ್ ಜಾರಿಗೆ ತರುವ ಕುರಿತು ಚಿಂತನೆ ನಡೆಸಿದೆ. ವಿಧಾನಸಭೆ, ಲೋಕಸಭೆ ಚುನಾವಣೆ ಹಾಗೂ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಒಂದೇ ಮತದಾರರ ಪಟ್ಟಿಯನ್ನು ಬಳಸಲು ಇರುವ ಸಾಧ್ಯತೆಗಳ ಕುರಿತಾಗಿ ಚರ್ಚೆ ನಡೆಸಲಾಗಿದೆ.
ಪ್ರಧಾನಮಂತ್ರಿಯವರ ಕಚೇರಿಯಲ್ಲಿ ಇತ್ತೀಚೆಗೆ ಸಭೆ ನಡೆಸಿ ಚುನಾವಣೆಗಳಿಗೆ ಒಂದೇ ಮತದಾರರ ಪಟ್ಟಿ ಬಳಕೆ ಮಾಡುವ ಕುರಿತಂತೆ ಮಾಹಿತಿ ಪಡೆದುಕೊಂಡಿದೆ.
ವಿಧಾನಸಭೆ, ಸ್ಥಳೀಯ ಸಂಸ್ಥೆ ಚುನಾವಣೆ ಮತ್ತು ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪ್ರತ್ಯೇಕ ಮತದಾರರ ಪಟ್ಟಿಯಿಂದ ಗೊಂದಲವುಂಟಾಗುತ್ತದೆ. ಇದನ್ನು ತಡೆಯಲು ಒಂದೇ ಮತದಾರರ ಪಟ್ಟಿ ಬಳಕೆ ಮಾಡುವ ಕುರಿತಾಗಿ ಚರ್ಚೆ ನಡೆಸಲಾಗಿದೆ.