ನವದೆಹಲಿ: ದೇಶಾದ್ಯಂತ ಸೆ.1 ರಿಂದ ಅನ್ ಲಾಕ್ 4.0 ಆರಂಭವಾಗಲಿದ್ದು, ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ದೇಶದಲ್ಲಿ ಕೊರೊನಾ ಸೋಂಕಿನ ಅಟ್ಟಹಾಸವೂ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 78,761 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ 35 ಲಕ್ಷ ಗಡಿ ದಾಟಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಒಂದೇ ದಿನದಲ್ಲಿ ದೇಶದಲ್ಲಿ 78,761 ಜನರಲ್ಲಿ ಕೋವಿಡ್ ಪಾಸಿಟೀವ್ ಪತ್ತೆಯಾಗಿದ್ದು, ಈ ಮೂಲಕ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 35,42,734ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ ಶೇ.76.6 ರಷ್ಟು ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಸೋಂಕಿತರಲ್ಲಿ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚಿದೆ ಎಂದು ತಿಳಿಸಿದೆ.