ದಾವಣಗೆರೆ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಲ್ಲಿ ಪಡಿತರ ಆಹಾರ ಪದಾರ್ಥಗಳನ್ನು ಪಡೆಯುತ್ತಿರುವ ವಿಕಲಚೇತನರು ತಮ್ಮ ಆಧಾರ್ ಸಂಖ್ಯೆಯನ್ನು ಪಡಿತರ ಚೀಟಿಯೊಂದಿಗೆ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿರುತ್ತದೆ.
ಮುಂದಿನ ದಿನಗಳಲ್ಲಿ ಸಂಕಷ್ಟಕ್ಕೊಳಗಾಗಿರುವ ವಿಕಲಚೇತನರಿಗೆ ಹೆಚ್ಚಿನ ಪಡಿತರ ಅಕ್ಕಿಯನ್ನು ವಿತರಿಸುವ ಉದ್ದೇಶವಿರುತ್ತದೆ. ಆದ್ದರಿಂದ ಗ್ರಾಮೀಣ ಭಾಗದ ವಿಕಲಚೇತನರು ತಮ್ಮ ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಆರ್.ಡಬ್ಲ್ಯೂ ಹಾಗೂ ನಗರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯು.ಆರ್.ಡಬ್ಲ್ಯೂಗಳನ್ನು ಸಂಪರ್ಕಿಸಿ ತಮ್ಮ ಪಡಿತರ ಚೀಟಿ ಜೆರಾಕ್ಸ್ ಪ್ರತಿ ಮತ್ತು ಆಧಾರ್ ಕಾರ್ಡ್ ಪ್ರತಿಯನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಸಹಾಯವಾಣಿ ಮತ್ತು ಮಾಹಿತಿ ಸಲಹಾ ಕೇಂದ್ರದ ದೂ.ಸಂ: 08192-263939 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.