ದಾವಣಗೆರೆ: ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳ ವಿದ್ಯಾಭ್ಯಾಸವನ್ನು ಪ್ರೋತ್ಸಾಹಿಸಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ, ಸಿಬಿಎಸ್ಇ ಹಾಗೂ ಐಸಿಎಸ್ಇ ಇವರು ನಡೆಸುವ 10ನೇ ತರಗತಿ ಪರೀಕ್ಷೇಗಳಲ್ಲಿ ಶೇ.60 ರಿಂದ 74.99 ಹಾಗೂ ಶೇ.75 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪ.ಜಾತಿಯ ವಿದ್ಯಾರ್ಥಿಗಳಿಗೆ ಕ್ರಮವಾಗಿ ತಲಾ 7000 ರೂ. ಮತ್ತು 15000 ರೂ.ಗಳ ಪ್ರೋತ್ಸಾಹ ಧನವನ್ನು ಮಂಜೂರು ಮಾಡಲು ಅವಕಾಶವಿರುತ್ತದೆ.
2020ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 2020-21ನೇ ಸಾಲಿನಿಂದ ಡಿ.ಬಿ.ಟಿ ಮೂಲಕ ಅನುಷ್ಟಾನ ಮಾಡಿ ಪ್ರೋತ್ಸಾಹ ಧನವನ್ನು ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುವುದು. ಆದ್ದರಿಂದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.