alex Certify ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ‘ಕೊರೊನಾ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ‘ಕೊರೊನಾ’

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಜನಸಾಮಾನ್ಯರಿಂದ ಹಿಡಿದು ರಾಜಕೀಯ ನಾಯಕರಲ್ಲಿಯೂ ಸೋಂಕು ಕಾಣಿಸಿಕೊಳ್ಳುತ್ತಿದೆ. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಈ ಕುರಿತು ಸ್ವತಃ ನಳಿನ್ ಕುಮಾರ್ ಕಟೀಲ್ ಮಾಹಿತಿ ನೀಡಿದ್ದು, ನಾನು ಕೊವಿಡ್ ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ತಿಳಿಸಿದ್ದಾರೆ.

ಜನರ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...