ವಿದೇಶಕ್ಕೆ ಓಡಿ ಹೋಗಿರುವ ವಿಜಯ್ ಮಲ್ಯಗೆ ಸುಪ್ರಿಂ ಕೋರ್ಟ್ ನಲ್ಲಿ ಹಿನ್ನಡೆಯಾಗಿದೆ.
ಮಲ್ಯ ನ್ಯಾಯಾಂಗ ನಿಂದನೆ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.
ಸಾವಿರಾರು ಕೋಟಿ ಸಾಲ ಮಾಡಿ ವಿದೇಶಕ್ಕೆ ಓಡಿ ಹೋಗಿರುವ ಮಲ್ಯ ವಿರುದ್ಧ ನ್ಯಾಯಾಂಗ ನಿಂದನೆ ಆರೋಪವಿದೆ. ನ್ಯಾಯಾಲಯದ ಆದೇಶ ಉಲ್ಲಂಘಿಸಿ ಮಲ್ಯ ಮಕ್ಕಳಿಗೆ 295 ಕೋಟಿ ರೂಪಾಯಿಯನ್ನು ವರ್ಗಾವಣೆ ಮಾಡಿದ್ದರು. ಇದು ನ್ಯಾಯಾಂಗ ನಿಂದನೆ ಎಂದು 2017ರಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು.
ಸುಪ್ರೀಂ ಕೋರ್ಟ್ ತೀರ್ಪನ್ನು ಪುನರ್ ಪರಿಶೀಲಿಸುವಂತೆ ಮಲ್ಯ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು. ಈಗ ಅರ್ಜಿ ವಜಾ ಮಾಡಿದೆ. ಅರ್ಜಿಯಲ್ಲಿ ಪುನರ್ ವಿಚಾರ ಮಾಡುವಂತಹ ಯಾವುದೇ ಮಹತ್ವದ ವಿಷ್ಯ ಹೇಳಲಾಗಿಲ್ಲವೆಂದು ಕೋರ್ಟ್ ಹೇಳಿದೆ.