ನವದೆಹಲಿ: ಭಾರತರತ್ನ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶರಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಒಂದು ವಾರ ಶೋಕಾಚರಣೆ ಘೋಷಿಸಿದೆ.
ಕೊರೋನಾ ಸೋಂಕಿನಿಂದಾಗಿ ದೆಹಲಿ ಸೇನಾ ಆಸ್ಪತ್ರೆಗೆ ದಾಖಲಾಗಿದ್ದ 84 ವರ್ಷದ ಪ್ರಣಬ್ ಮುಖರ್ಜಿ ಕೋಮಾ ಸ್ಥಿತಿಗೆ ಜಾರಿದ್ದರು. ಮೆದುಳಿನ ಶಸ್ತ್ರಚಿಕಿತ್ಸೆ ನಂತರವೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೋಮಾಗೆ ಜಾರಿದ್ದು 21 ದಿನ ದೀರ್ಘಕಾಲ ಕೋಮಾದಲ್ಲಿದ್ದ ಪ್ರಣಬ್ ಮುಖರ್ಜಿ ಇವತ್ತು ಸಂಜೆ ನಿಧನರಾಗಿದ್ದಾರೆ.
ಅವರ ನಿಧನಕ್ಕೆ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಮಂತ್ರಿ ಹಾಗೂ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಅವರ ಗೌರವಾರ್ಥ ಒಂದು ವಾರ ಶೋಕಾಚರಣೆ ಘೋಷಿಸಲಾಗಿದೆ.
ಶೋಕಾಚರಣೆಯ ಅವಧಿಯಲ್ಲಿ ರಾಷ್ಟ್ರದಾದ್ಯಂತ ಎಲ್ಲಾ ಸರ್ಕಾರಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವು ಅರ್ಧದಷ್ಟು ಹಾರಿಸಲಾಗುವುದು. ಯಾವುದೇ ಅಧಿಕೃತ ಮನರಂಜನೆ ಇರುವುದಿಲ್ಲ. ಅಂತ್ಯಕ್ರಿಯೆಯ ದಿನಾಂಕ, ಸಮಯ ಮತ್ತು ಸ್ಥಳವನ್ನು ನಂತರ ಪ್ರಕಟಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.