ಬಿಹಾರದಲ್ಲಿ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಮೈದುನ-ಅತ್ತಿಗೆಯನ್ನು ನೋಡಬಾರದ ಸ್ಥಿತಿಯಲ್ಲಿ ನೋಡಿದ ಜನರು ಅವ್ರಿಗೆ ಮದುವೆ ಮಾಡಿಸಿದ್ದಾರೆ.
ಲಕ್ಷ್ಮೀನಾರಾಯಣಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಬಂಧದಲ್ಲಿ ಅತ್ತಿಗೆ-ಮೈದುನರಾಗುವವರನ್ನು ನೋಡಬಾರದ ಸ್ಥಿತಿಯಲ್ಲಿ ನೋಡಿದ್ದಾರೆ. ನಂತ್ರ ಯುವಕನಿಗೆ ಜನರು ಮನಸ್ಸಿಗೆ ಬಂದಂತೆ ಥಳಿಸಿದ್ದಾರೆ. ನಂತ್ರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸ್ ಸ್ಥಳಕ್ಕೆ ಬರ್ತಿದ್ದಂತೆ ಅವರಿಬ್ಬರಿಗೆ ಮದುವೆ ಮಾಡಿಸಿದ ಜನರು ನಂತ್ರ ಪೊಲೀಸರಿಗೆ ಜೋಡಿಯನ್ನು ಒಪ್ಪಿಸಿದ್ದಾರೆ. ಯಾವುದೇ ಪ್ರಕರಣ ದಾಖಲಿಸಿಕೊಳ್ಳದೆ ಪೊಲೀಸರು ಅವ್ರನ್ನು ಬಿಟ್ಟಿದ್ದಾರೆ.