alex Certify ಉದ್ಯೋಗ ನೇಮಕಾತಿ: ಕೇಂದ್ರ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗ ನೇಮಕಾತಿ: ಕೇಂದ್ರ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಕೇಂದ್ರ ಸರ್ಕಾರದ ನೇಮಕಾತಿ ಪ್ರಕ್ರಿಯೆ ಸರಳೀಕರಣಕ್ಕೆ ಕರ್ಮಯೋಗಿ ಯೋಜನೆ ಜಾರಿಗೆ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆದ ಸಂಪುಟ ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕ ಮತ್ತು ಸರಳೀಕರಣಗೊಳಿಸಲು ಕರ್ಮಯೋಗಿ ಯೋಜನೆ ಜಾರಿಗೆ ಅನುಮೋದನೆ ನೀಡಲಾಗಿದೆ. ನಾಗರಿಕ ಸೇವೆಗಳ ಸಾಮರ್ಥ್ಯ ವೃದ್ಧಿಗೆ ಹೊಸ ರಾಷ್ಟ್ರೀಯ ಸಂಸ್ಥೆ ಸ್ಥಾಪನೆಗೆ ತೀರ್ಮಾನಿಸಲಾಗಿದೆ.

ಸಾರ್ವಜನಿಕ ಸೇವೆಯ ಸಮರ್ಥ ವಿತರಣೆಗಾಗಿ ವೈಯಕ್ತಿಕ, ಸಾಂಸ್ಥಿಕ ಮತ್ತು ಪ್ರಕ್ರಿಯೆ ಹಂತಗಳಲ್ಲಿ ಸಮಗ್ರ ಸುಧಾರಣೆ ತರಲಾಗುವುದು. ಪ್ರಧಾನಿ ನೇತೃತ್ವದ ಮಾನವ ಸಂಪನ್ಮೂಲ ಮಂಡಳಿಯಿಂದ ಯೋಜನೆಗಳಿಗೆ ಅನುಮೋದನೆ ಮತ್ತು ಮೇಲ್ವಿಚಾರಣೆ ನಡೆಸಲಾಗುವುದು.

ತರಬೇತಿ ಮಾನದಂಡಗಳ ಸಮನ್ವಯ, ಹಂಚಿಕೆಯ ಬೋಧಕವರ್ಗ, ಸಂಪನ್ಮೂಲಗಳ ಸೃಷ್ಟಿ ಮತ್ತು ಎಲ್ಲಾ ಕೇಂದ್ರೀಯ ಸಂಸ್ಥೆಗಳ ಮೇಲ್ವಿಚಾರಣೆಯನ್ನು ಸಾಮರ್ಥ್ಯವೃದ್ಧಿ ಆಯೋಗ ನಡೆಸಲಿದೆ. ಆನ್ಲೈನ್ ಕಲಿಕಾ ವೇದಿಕೆಯನ್ನು ಹೊಂದಲಿದ್ದು ವಿಶ್ವದರ್ಜೆಯ ಕಲಿಕೆಯ ವಿಷಯವನ್ನು ಒದಗಿಸಲಾಗುವುದು ಎಂದು ಕ್ಯಾಬಿನೆಟ್ ಸಭೆಯ ನಂತರ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಈ ಕುರಿತಾಗಿ ಮಾಹಿತಿ ನೀಡಿದ್ದಾರೆ.

ಕೇಂದ್ರ ಸರ್ಕಾರಿ ಉದ್ಯೋಗ, ಸರ್ಕಾರಿ ಸ್ವಾಮ್ಯದ ಉದ್ದಿಮೆ, ಕಚೇರಿ, ಕಾರ್ಪೊರೇಟ್ ವಿಭಾಗ, ನಿಗಮಗಳು ಸೇರಿದಂತೆ ನೇಮಕಾತಿ ವೇಳೆ ಪಾಲಿಸಬೇಕಾದ ನಿಯಮಗಳ ಕುರಿತಂತೆ ಹೊಸ ಯೋಜನೆ ಜಾರಿಗೆ ತರಲಾಗುವುದು ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...