ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಶಿಕ್ಷಣ ಪ್ರವೇಶಕ್ಕೆ ಆನ್ಲೈನ್ ಮೂಲಕ ದಾಖಲೆ ಅಪ್ಲೋಡ್ ಮಾಡುವ ಪ್ರಕ್ರಿಯೆ ಮುಂದೂಡಿಕೆ ಮಾಡಲಾಗಿದೆ.
ಜೆಇಇ ಮುಖ್ಯ ಪರೀಕ್ಷೆ ನಡೆಯುತ್ತಿರುವ ಕಾರಣದಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲ ದಾಖಲೆಗಳನ್ನು ಅಪ್ಲೋಡ್ ಮಾಡುವ ಪ್ರಕ್ರಿಯೆ ಮುಂದೂಡಿದೆ. ದಾಖಲಾತಿ ಪ್ರಕ್ರಿಯೆ ಆರಂಭವಾಗಬೇಕಿತ್ತು. ಸೆಪ್ಟೆಂಬರ್ 6 ರವರೆಗೆ ಪ್ರಕ್ರಿಯೆ ಮುಂದೂಡಲಾಗಿದೆ.
ರ್ಯಾಂಕ್ ಪ್ರಕಾರ ದಾಖಲೆಗಳನ್ನು ಅಪ್ಲೋಡ್ ಮಾಡುವ ಪರಿಷ್ಕೃತ ವೇಳಾಪಟ್ಟಿಯನ್ನು ಸೆಪ್ಟಂಬರ್ 5 ರಂದು ಪ್ರಕಟಿಸಲಾಗುವುದು. ನಿನ್ನೆ ಬೆಳಿಗ್ಗೆಯಿಂದಲೇ ದಾಖಲಾತಿ ಸಲ್ಲಿಕೆಗೆ ವಿದ್ಯಾರ್ಥಿಗಳು ಸಿದ್ಧತೆ ಮಾಡಿಕೊಂಡಿದ್ದರು. ಆದರೆ, ವೆಬ್ಸೈಟ್ ಓಪನ್ ಆಗಲಿಲ್ಲ. ನಂತರ ಮುಖ್ಯಪರೀಕ್ಷೆ ಹಿನ್ನೆಲೆಯಲ್ಲಿ ದಿನಾಂಕ ಮುಂದೂಡಲಾಗಿದೆ ಎಂದು ಹೇಳಲಾಗಿದೆ.