
ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ನಂಟು ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡ ಸಿಸಿಬಿ ಪೊಲೀಸರು ಖ್ಯಾತ ನಟಿ ರಾಗಿಣಿ ಆಪ್ತ ರವಿಶಂಕರ್ ನನ್ನು ಬಂಧಿಸಿದ್ದಾರೆ.
ಈಗಾಗಲೇ ಸಿಸಿಬಿ ವಶದಲ್ಲಿರುವ ರವಿಶಂಕರ್ ನನ್ನು ಬಂಧಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಡ್ಜ್ ಎದುರು ಹಾಜರುಪಡಿಸಲಾಗಿದೆ. ವಿಚಾರಣೆಗಾಗಿ ರವಿಶಂಕರ್ ನನ್ನು 5 ದಿನ ಕಸ್ಟಡಿಗೆ ಪಡೆಯಲಾಗಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಚಾಮರಾಜಪೇಟೆಯ ಸಿಸಿಬಿ ಕಚೇರಿಗೆ ಭೇಟಿ ನೀಡಿ ವಿಚಾರಣೆಯ ಮಾಹಿತಿ ಪಡೆದುಕೊಂಡಿದ್ದಾರೆ. ಇದರೊಂದಿಗೆ ಮತ್ತೊಬ್ಬ ನಟಿಯ ಆಪ್ತ ಎಂದು ಹೇಳಲಾಗಿರುವ ರಾಹುಲ್ ನನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎಂದು ಹೇಳಲಾಗಿದೆ.