ಬೆಂಗಳೂರು: ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಜ್ವರ ಕಾಣಿಸಿಕೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಳೆದವಾರ ಡಿ.ಕೆ. ಶಿವಕುಮಾರ್ ಕೊರೋನಾದಿಂದ ಗುಣಮುಖರಾಗಿ ಮನೆಗೆ ಮರಳಿ ವಿಶ್ರಾಂತಿಯಲ್ಲಿದ್ದರು. ಅವರಿಗೆ ಮತ್ತೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿದೆ.
ಸುಗುಣ ಆಸ್ಪತ್ರೆಗೆ ದಾಖಲಾಗಿ 7 ದಿನ ಚಿಕಿತ್ಸೆ ಪಡೆದ ಅವರು ಕೊರೋನಾ ನೆಗೆಟಿವ್ ವರದಿ ಬಂದ ಹಿನ್ನೆಲೆಯಲ್ಲಿ ಮನೆಗೆ ಮರಳಿದ್ದರು. ಅವರಿಗೆ ಮತ್ತೆ ಜ್ವರ ಕಾಣಿಸಿಕೊಂಡಿದ್ದು ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.