ನವದೆಹಲಿ: ವಾಹನ ಉದ್ಯಮಕ್ಕೆ ಶೀಘ್ರದಲ್ಲೇ ಒಳ್ಳೆಯ ಸುದ್ದಿ ಸಿಗಲಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಪ್ರಕಾಶ್ ಜಾವಡೇಕರ್ ಸುಳಿವು ನೀಡಿದ್ದಾರೆ.
ಆಟೋ ಸ್ಕ್ರಾಪೇಜ್ ನೀತಿ ಸಿದ್ಧವಾಗಿದ್ದು ವಾಹನ ಉದ್ಯಮಕ್ಕೆ ಒಳ್ಳೆಯ ಸುದ್ದಿ ಸಿಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಾಹನಗಳ ಮೇಲಿನ ಜಿಎಸ್ಟಿ ದರ ಕಡಿತ ಮಾಡುವ ಸಾಧ್ಯತೆಗಳಿವೆ. ಹಣಕಾಸು ಸಚಿವಾಲಯದ ವತಿಯಿಂದ ವಾಹನಗಳ ಮೇಲಿನ ಜಿಎಸ್ಟಿ ದರ ಕಡಿತ ಸಾಧ್ಯತೆಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಎಲ್ಲ ಮಾಹಿತಿಗಳನ್ನು ಈಗಲೇ ನೀಡಲಾಗದು ಎಂದು ತಿಳಿಸಿದ್ದಾರೆ.
ದ್ವಿಚಕ್ರವಾಹನ, ತ್ರಿಚಕ್ರವಾಹನ, ಸಾರ್ವಜನಿಕ ಸಾರಿಗೆ ವಾಹನಗಳು ಹಾಗೂ ನಂತರದಲ್ಲಿ ನಾಲ್ಕು ಚಕ್ರದ ವಾಹನಗಳ ಜಿಎಸ್ಟಿ ದರ ಕಡಿತ ಮಾಡುವ ಸಾಧ್ಯತೆ ಇದ್ದು ವಾಹನ ಉದ್ಯಮಕ್ಕೆ ಸಂಬಂಧಿಸಿದಂತೆ ಶೀಘ್ರವೇ ಒಳ್ಳೆಯ ಸುದ್ದಿ ಸಿಗುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.