ಬೆಂಗಳೂರು: ಶಾಲೆ ದಾಖಲಾತಿಗೆ ಸರ್ಕಾರ ಅನುಮತಿ ನೀಡಿದೆ. ಖಾಸಗಿ ಶಾಲೆಗಳು ಮತ್ತು ಶಿಕ್ಷಕರ ಆರ್ಥಿಕ ಸಂಕಷ್ಟ ನೀಗಿಸಲು ಸಂಧಾನ ಸೂತ್ರ ಸಿದ್ಧಪಡಿಸಿದ್ದು ಪೋಷಕರಿಗೆ ಹೊರೆಯಾಗದಂತೆ ಮೊದಲ ಕಂತಿನ ಶುಲ್ಕವನ್ನು ಸಂಗ್ರಹಿಸಲು ಸಮ್ಮತಿಸಲಾಗಿದೆ.
ಕೊರೋನಾ ಕಾರಣದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಖಾಸಗಿ ಶಾಲೆಗಳು ಮತ್ತು ವೇತನ ಇಲ್ಲದೇ ಸಂಕಷ್ಟದಲ್ಲಿರುವ ಶಿಕ್ಷಕರ ಹಿತದೃಷ್ಟಿಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿನ ಶಾಲಾ ಶುಲ್ಕದ ಮೊದಲ ಕಂತು ಪಡೆಯಲು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುಮತಿ ನೀಡಲಾಗಿದೆ.
ಪೋಷಕರಿಗೆ ಹೊರೆಯಾಗಬಾರದು ಎಂಬ ಕಾರಣಕ್ಕೆ ಮೊದಲ ಕಂತು ಮಾತ್ರ ಪಡೆಯಲು ಅವಕಾಶ ನೀಡಲಾಗಿದ್ದು ಈ ಹಣದಲ್ಲಿ ಬೋಧಕ, ಬೋಧಕೇತರ ಸಿಬ್ಬಂದಿ ವೇತನ ಕಡ್ಡಾಯವಾಗಿ ಪಾವತಿಸಲು ತಿಳಿಸಲಾಗಿದೆ.
ಒಂದು ತಿಂಗಳ ಶುಲ್ಕ ಮಾತ್ರ ಪಡೆದು ಶೈಕ್ಷಣಿಕ ವರ್ಷಕ್ಕೆ ದಾಖಲಾತಿ ಮಾಡಿಕೊಳ್ಳಲು ತಿಳಿಸಲಾಗಿದೆ. ಕಳೆದ ವರ್ಷಕ್ಕಿಂತ ಹೆಚ್ಚು ಶುಲ್ಕ ಪಡೆಯುವಂತಿಲ್ಲ. ಸಾಧ್ಯವಾದರೆ ಶುಲ್ಕ ಕಡಿಮೆ ಮಾಡಬೇಕೆಂದು ಹೇಳಲಾಗಿದೆ.