ಬೆಂಗಳೂರು: ಸೆಪ್ಟೆಂಬರ್ 6 ರಿಂದ 8 ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಸೆಪ್ಟಂಬರ್ ಎಂಟರವರೆಗೆ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಂಡ್ಯ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.