ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಆರೋಪ ಕೇಸ್ ಗೆ ಸಂಬಂಧಿಸಿದಂತೆ ಇಂದು ಬಂಧಿತ ಇಬ್ಬರು ಆರೋಪಿಗಳನ್ನು ಸಿಸಿಬಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಿದೆ.
ಡ್ರಗ್ಸ್ ಮಾಫಿಯಾದಲ್ಲಿ ಬಂಧನಕ್ಕೀಡಾಗಿರುವ ಪ್ರಮುಖ ಆರೋಪಿಗಳಾದ ರವಿಶಂಕರ್ ಹಾಗೂ ವಿರೇನ್ ಅವರನ್ನು ಸಿಸಿಬಿ ಅಧಿಕಾರಿಗಳು ವೈದ್ಯಕೀಯ ಪರೀಕ್ಷೆ ನಡೆಸಲು ಕರೆದೊಯ್ಯುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಆರೋಪಿಗಳ ವರದಿಯಲ್ಲಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುವ ಸಾಧ್ಯತೆ ದಟ್ಟವಾಗಿದೆ.
ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣದ ಪ್ರಮುಖ ಆರೋಪಿಗಳಾದ ರವಿಶಂಕರ್ ಹಾಗೂ ವಿರೇನ್ ಖನ್ನಾ ಈಗಾಗಲೇ ಸಿಸಿಬಿ ವಶದಲ್ಲಿದ್ದು, ವೈದ್ಯಕೀಯ ಪರೀಕ್ಷೆ ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಿದ್ದಾರೆ. ಇನ್ನು ಮಹಿಳಾ ಸಾಂತ್ವನ ಕೇಂದ್ರದಲ್ಲಿರುವ ನಟಿ ರಾಗಿಣಿ ದ್ವಿವೇದಿಯವರನ್ನು ಮಧ್ಯಾಹ್ನ 1 ಗಂಟೆಗೆ ಸಿಸಿಬಿ, ಜಡ್ಜ್ ಮುಂದೆ ಹಾಜರುಪಡಿಸಲಿದೆ ಎಂದು ತಿಳಿದು ಬಂದಿದೆ.