alex Certify ಬೆನ್ನು ನೋವು ಬಳಿಕ ರಾಗಿಣಿಗೆ ಈಗ ಅಲರ್ಜಿ ಸಮಸ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆನ್ನು ನೋವು ಬಳಿಕ ರಾಗಿಣಿಗೆ ಈಗ ಅಲರ್ಜಿ ಸಮಸ್ಯೆ

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ದ್ವಿವೇದಿ ಅವರಿಗೆ ಅಲರ್ಜಿ ಸಮಸ್ಯೆ ಕಾಣಿಸಿಕೊಂಡಿದೆಯಂತೆ.

ಮಹಿಳಾ ಸಾಂತ್ವನ ಕೇಂದ್ರದಲ್ಲಿರುವ ರಾಗಿಣಿಯವರನ್ನು ಎರಡು ದಿನಗಳ ಹಿಂದೆ ಸಿಸಿಬಿ ವಿಚಾರಣೆಗೆ ಒಳಪಡಿಸಲು ಮುಂದಾದಾಗ ತನಗೆ ಜ್ವರ ಹಾಗೂ ಬೆನ್ನು ನೋವು ಇರುವುದಾಗಿ ಹೇಳಿ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದರು. ಇಂದು ರಾಗಿಣಿ ಅವರ ಸಿಸಿಬಿ ಕಸ್ಟಡಿ ಅವಧಿ ಮುಗಿಯುತ್ತಿರುವ ಹಿನ್ನಲೆಯಲ್ಲಿ ಅಧಿಕಾರಿಗಳು ಅಂತಿಮವಾಗಿ ವಿಚಾರಣೆ ನಡೆಸಲು ಮುಂದಾಗಿದ್ದು, ಈ ವೇಳೆ ತಮಗೆ ಅಲರ್ಜಿ ಸಮಸ್ಯೆಯಾಗುತ್ತಿದ್ದು, ವೈದ್ಯರನ್ನು ಕರೆಸುವಂತೆ ರಾಗಿಣಿ ಹೇಳಿದ್ದಾರೆ.

ರಾಗಿಣಿ ಕೋರಿಕೆ ಹಿನ್ನಲೆಯಲ್ಲಿ ಸಿಸಿಬಿ ಅಧಿಕಾರಿಗಳು ವೈದ್ಯರನ್ನು ಕರೆಸಿ ತಪಾಸಣೆ ನಡೆಸಿದ್ದಾರೆ. ಬಳಿಕ ಪ್ರಕರಣ ಸಂಬಂಧ ರಾಗಿಣಿಯವರನ್ನು ಸಿಸಿಬಿ ಮತ್ತೆ ವಿಚಾರಣೆಗೆ ಒಳಪಡಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...