ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣ ಸಂಬಂಧ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಅವರಿಗೆ ಇಂದು ಜಾಮೀನು ಸಿಗುವುದು ಅನುಮಾನ ಎನ್ನಲಾಗಿದೆ.
ಮೂರು ದಿನಗಳ ಹಿಂದೆ ನಟಿ ರಾಗಿಣಿ ಅವರನ್ನು ಸಿಸಿಬಿ ವಶಕ್ಕೆ ಪಡೆದಿತ್ತು. ಇಂದು ಸಿಸಿಬಿ ಕಸ್ಟಡಿ ಅವಧಿ ಮುಗಿದ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು ನಟಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.
ಈ ವೇಳೆ ಸಿಸಿಬಿ ಪೊಲೀಸರು ನಟಿ ರಾಗಿಣಿ ವಿಚಾರಣೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಅವರನ್ನು ಇನ್ನಷ್ಟು ವಿಚಾರಣೆಗೆ ಒಳಪಡಿಸುವ ಅಗತ್ಯವಿದ್ದು, ಸಿಸಿಬಿ ಕಸ್ಟಡಿಗೆ ವಹಿಸುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ಮಧ್ಯಾಹ್ನ ಎರಡು ಗಂಟೆ ಬಳಿಕ ನಡೆಯಲಿದ್ದು, ಕೆಲ ಹೊತ್ತಲ್ಲೇ ರಾಗಿಣಿ ಭವಿಷ್ಯ ನಿರ್ಧಾರವಾಗಲಿದೆ.