ತುಪ್ಪದ ಹುಡುಗಿ ರಾಗಿಣಿಗೆ ಇಂದೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ರಾಗಿಣಿಯನ್ನು ಮತ್ತೈದು ದಿನ ಸಿಸಿಬಿ ವಶಕ್ಕೆ ನೀಡಲಾಗಿದೆ. ಡ್ರಗ್ಸ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ರಾಗಿಣಿಗೆ ಇಂದು ನ್ಯಾಯಾಂಗ ಬಂಧನ ಮುಗಿದಿತ್ತು. ಈ ಹಿನ್ನೆಲೆಯಲ್ಲಿ 1ನೇ ಎಸಿಎಂಎಂ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದೆ.
ವಿಚಾರಣೆ ನಡೆಸಿದ ಕೋರ್ಟ್ ರಾಗಿಣಿಯನ್ನು ಐದು ದಿನಗಳವರೆಗೆ ಸಿಸಿಬಿ ವಶಕ್ಕೆ ನೀಡಿದೆ. ಅಧಿಕಾರಿಗಳು ಹೆಚ್ಚಿನ ವಿಚಾರಣೆಗೆ 10 ದಿನ ಕಸ್ಟಡಿಗೆ ನೀಡುವಂತೆ ಕೋರಿದ್ದರು ಎನ್ನಲಾಗಿದೆ. ಆದ್ರೆ ಐದು ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ.
ಈ ಮಧ್ಯೆ ರಾಗಿಣಿ ಪರ ವಕೀಲರ ಬದಲಾವಣೆಯಾಗಿದೆ. ಮುಂಬೈ ಮೂಲದ ವಕೀಲರನ್ನು ನೇಮಿಸಲಾಗಿದೆ. ಹಾಗಾಗಿ ಹೊಸ ಜಾಮೀನು ಅರ್ಜಿಯನ್ನು ಸಲ್ಲಿಸಲಾಗ್ತಿದೆ. ಮುಂಬೈನಿಂದ ಬಂದ ನಂತ್ರ ವಕೀಲರು ಹೊಸ ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ.