alex Certify ಬಿಗ್‌ ಬ್ರೇಕಿಂಗ್:‌ ನಟಿ ಸಂಜನಾ ಮನೆ ಮೇಲೆ ಸಿಸಿಬಿ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್‌ ಬ್ರೇಕಿಂಗ್:‌ ನಟಿ ಸಂಜನಾ ಮನೆ ಮೇಲೆ ಸಿಸಿಬಿ ದಾಳಿ

ಇಂದು ನಡೆದ ಅನಿರೀಕ್ಷಿತ ಬೆಳವಣಿಗೆಯಲ್ಲಿ ಸ್ಯಾಂಡಲ್‌ ವುಡ್‌ ನಟಿ ಸಂಜನಾ ಗಲ್ರಾನಿ ನಿವಾಸದ ಮೇಲೆ ಸಿಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಮೂರು ವಾಹನಗಳಲ್ಲಿ ಬಂದ ಆರಕ್ಕೂ ಹೆಚ್ಚು ಅಧಿಕಾರಿಗಳ ತಂಡ ಇಂದು ಬೆಳಿಗ್ಗೆ ಇಂದಿರಾ ನಗರದಲ್ಲಿರುವ ಸಂಜನಾ ಫ್ಲಾಟ್‌ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.

ಈ ಮೊದಲು ನಟಿ ರಾಗಿಣಿ ನಿವಾಸದ ಮೇಲೂ ಇದೇ ರೀತಿ ದಾಳಿ ನಡೆಸಿದ್ದ ಅಧಿಕಾರಿಗಳು ಬಳಿಕ ಅವರನ್ನು ವಿಚಾರಣೆಗೆ ಕರೆಸಿಕೊಂಡು ಬಂಧನಕ್ಕೊಳಪಡಿಸಿದ್ದರು.

ಇದೀಗ ಸಂಜನಾ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿರುವ ಹಿನ್ನಲೆಯಲ್ಲಿ ಅವರನ್ನೂ ಬಂಧನಕ್ಕೊಳಪಡಿಸಲಾಗುತ್ತಾ ಎಂಬ ಪ್ರಶ್ನೆ ಮೂಡಿದೆ.

ಈಗಾಗಲೇ ಸಂಜನಾ ಆಪ್ತ ರಾಹುಲ್‌ ಸಿಸಿಬಿ ವಶದಲ್ಲಿದ್ದು, ಆತ ನೀಡಿದ ಮಾಹಿತಿ ಆಧಾರದ ಮೇಲೆಯೇ ಇಂದು ಬೆಳಿಗ್ಗೆ ಸಂಜನಾ ನಿವಾಸದ ಮೇಲೆ ದಾಳಿ ನಡೆಸಲಾಗಿದೆ ಎನ್ನಲಾಗಿದೆ.

ಅಧಿಕಾರಿಗಳು ಸಂಜನಾ ನಿವಾಸದಲ್ಲಿ ಪರಿಶೀಲನೆ ನಡೆಸಿದ್ದು, ಬಳಿಕ ಅವರನ್ನು ವಿಚಾರಣೆಗೆ ಬರುವಂತೆ ಸೂಚಿಸುವ ಸಾಧ್ಯತೆಯಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...