ಬೆಂಗಳೂರು: ಡ್ರಗ್ಸ್ ಮಾಫಿಯಾ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ. ಯಾವುದೇ ಒತ್ತಡಕ್ಕೂ ಮಣಿಯಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪುನರುಚ್ಛರಿಸಿದ್ದಾರೆ.
ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಹಾಗೂ ಪ್ರಭಾವಿಗಳ ಬಂಧನ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ ಯಡಿಯೂರಪ್ಪ, ಡ್ರಗ್ಸ್ ಮಾಫಿಯಾ ವಿರುದ್ಧ ನಮ್ಮ ಶಕ್ತಿ ಮೀರಿ ಕ್ರಮ ಕೈಗೊಳ್ಳಲಾಗುವುದು. ಆರೋಪಿಗಳು ಎಷ್ಟೇ ಪ್ರಭಾವಿಗಳಾಗಿರಲಿ ಒತ್ತಡಕ್ಕೆ ಮಣಿಯುವ ಪ್ರಶ್ನೆಯಿಲ್ಲ ಎಂಬುದನ್ನು ಜನತೆಗೆ ಸ್ಪಷ್ಟ ಪಡಿಸಲು ಬಯಸುತ್ತೇನೆ ಎಂದರು.
ಡ್ರಗ್ಸ್ ಮಾಫಿಯಾಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಿದೆ. ನಮ್ಮ ಶಕ್ತಿ ಮೀರಿ ಕ್ರಮ ಕೈಗೊಳ್ಳಲು ಬದ್ಧರಾಗಿದ್ದೇವೆ. ಶಾಲಾ-ಕಾಲೇಜುಗಳಲ್ಲಿ ಜಾಗೃತಿಯನ್ನು ಮೂಡಿಸುತ್ತೇವೆ ಎಂದು ಹೇಳಿದರು.