ಭಾರತದ ಪ್ರಖ್ಯಾತ ಉದ್ಯಮ ಸಂಸ್ಥೆ ಟಾಟಾ ಗ್ರೂಪ್ ದೇಶದಲ್ಲಿ ಮೊದಲ ಕೋವಿಡ್ ಆಸ್ಪತ್ರೆಯನ್ನು ಕಾಸರಗೋಡಿನಲ್ಲಿ ನಿರ್ಮಿಸಿದೆ.
ಕಾಸರಗೋಡಿನ ತೆಕ್ಕಿಲ್ ಗ್ರಾಮದಲ್ಲಿ 60 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ 551 ಹಾಸಿಗೆಗಳ ಆಸ್ಪತ್ರೆಯನ್ನು ಟಾಟಾ ಗ್ರೂಪ್, ಕೇರಳ ಸರ್ಕಾರಕ್ಕೆ ಹಸ್ತಾಂತರಿಸಿದೆ.
5.5 ಎಕರೆ ಪ್ರದೇಶದಲ್ಲಿ 81,000 ಚದರಡಿಯ ಆಸ್ಪತ್ರೆಯನ್ನು ಐದು ತಿಂಗಳಲ್ಲಿ ಶಿಪ್ಪಿಂಗ್ ಕಂಟೇನರ್ ಬಳಸಿ ಸಿದ್ಧಪಡಿಸಲಾಗಿದೆ. ಕೋವಿಡ್ ರೋಗಿಗಳಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲು ಭಾರತದಲ್ಲಿ ನಿರ್ಮಿಸಲಾದ ಮೊದಲ ಆಸ್ಪತ್ರೆ ಇದಾಗಿದೆ ಎಂದು ಹೇಳಲಾಗುತ್ತಿದೆ.
ಟಾಟಾ ಪ್ರಾಜೆಕ್ಟ್ ನ ಡೆಪ್ಯೂಟಿ ಜನರಲ್ ಮ್ಯಾನೇಜರ್ ಗೋಪಿನಾಥ ರೆಡ್ಡಿ ಅವರು ಆಸ್ಪತ್ರೆಯ ಕೀಲಿಯನ್ನು ಕಾಸರಗೋಡು ಜಿಲ್ಲಾಧಿಕಾರಿಯವರಿಗೆ ಹಸ್ತಾಂತರಿಸಿದರು.
ಕೊರೊನಾ ವಿರುದ್ಧದ ಹೋರಾಟಕ್ಕೆ ಉದ್ಯಮಿ ರತನ್ ಟಾಟಾ ಅವರು 500 ಕೋಟಿ ರೂಪಾಯಿಯನ್ನು ಈಗಾಗಲೇ ನೀಡಿದ್ದಾರೆ.