ಬೆಂಗಳೂರು: ಡ್ರಗ್ಸ್ ನಂಟು ಆರೋಪ ಪ್ರಕರಣ ಸಂಬಂಧ ಸಿಸಿಬಿ ವಶದಲ್ಲಿರುವ ನಟಿಯರಾದ ಸಂಜನಾ ಗಲ್ರಾಣಿ ಹಾಗೂ ರಾಗಿಣಿ ದ್ವಿವೇದಿ ಇಬ್ಬರೂ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕೆ ಸಿಸಿಬಿ ಅಧಿಕಾರಿಗಳು ಇಬ್ಬರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಸಾಂತ್ವನ ಕೇಂದ್ರದಲ್ಲಿರುವ ನಟಿ ಸಂಜನಾ ಎರಡು ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇನ್ನು ಕಳೆದ 7 ದಿನಗಳಿಂದ ಸಾಂತ್ವನ ಕೇಂದ್ರದಲ್ಲಿರುವ ನಟಿ ರಾಗಿಣಿ ಕೂಡ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರಂತೆ.
ಈ ಹಿನ್ನಲೆಯಲ್ಲಿ ಇಬ್ಬರು ನಟಿಮಣಿಯರನ್ನೂ ಮಲ್ಲೇಶ್ವರಂ ಕೆ.ಸಿ ಜನರಲ್ ಆಸ್ಪತ್ರೆಗೆ ಕರೆದೊಯ್ದಿರುವ ಸಿಸಿಬಿ ಅಧಿಕಾರಿಗಳು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ವೈದ್ಯಕೀಯ ಪರೀಕ್ಷೆ ಬಳಿಕ ಸಿಸಿಬಿ ಅಧಿಕಾರಿ ಅಂಜುಮಾಲಾ ನಾಯಕ್ ನೇತೃತ್ವದಲ್ಲಿ ಇಬ್ಬರು ನಟಿಯರನ್ನು ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ.