ಬೆಂಗಳೂರು: ರಾಜ್ಯದ ಹಲವೆಡೆ ಮಳೆಯ ತೀವ್ರತೆ ಹೆಚ್ಚಾಗಿದ್ದು ಕರಾವಳಿ ಪ್ರದೇಶದಲ್ಲಿ ಮುಂಗಾರು ಬಿರುಸುಗೊಂಡಿರುವ ಕಾರಣ ಸೆಪ್ಟೆಂಬರ್ 12, 13 ರಂದು ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸೆಪ್ಟೆಂಬರ್ 13 ರಂದು ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಅದೇ ರೀತಿ, ಶಿವಮೊಗ್ಗ, ಕೋಲಾರ, ಕೊಡಗು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಧಾರವಾಡ, ಹಾಸನ, ಚಿಕ್ಕಮಗಳೂರು, ಬೀದರ್, ಬೆಳಗಾವಿ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.