ಬೆಂಗಳೂರು: ವಿಧಾನಮಂಡಲ ಅಧಿವೇಶನಕ್ಕೆ ಮೊದಲು ಸಂಪುಟ ವಿಸ್ತರಣೆ ಮಾಡಲು ಸಿಎಂ ಚಿಂತನೆ ನಡೆಸಿದ್ದಾರೆ. ಸೆಪ್ಟೆಂಬರ್ 18 ರಂದು ಸಿಎಂ ಯಡಿಯೂರಪ್ಪ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ ಎಂದು ಹೇಳಲಾಗಿದೆ.
ಸೆಪ್ಟಂಬರ್ 17 ರಂದು ಪಿತೃಪಕ್ಷ ಮುಗಿದ ನಂತರ ಸಿಎಂ ಸೆಪ್ಟೆಂಬರ್ 18ರಂದು ದೆಹಲಿಗೆ ತೆರಳಲಿದ್ದಾರೆ. ವರಿಷ್ಠರ ಒಪ್ಪಿಗೆಯೊಂದಿಗೆ ಮುಂಗಾರು ಅಧಿವೇಶನಕ್ಕೆ ಮೊದಲು ಸಂಪುಟ ವಿಸ್ತರಣೆ ಮಾಡಲಿದ್ದಾರೆ.
ಕೇಂದ್ರ ಗೃಹಸಚಿವ ಅಮಿತ್ ಶಾ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಸಿಎಂ ಯಡಿಯೂರಪ್ಪ ಸಂಪುಟ ವಿಸ್ತರಣೆ ಕುರಿತಾಗಿ ಚರ್ಚೆ ನಡೆಸಲಿದ್ದಾರೆ. ಅಧಿವೇಶನಕ್ಕೆ ಮೊದಲು ನಾಲ್ವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಿದ್ದು, ನವಂಬರ್ ನಲ್ಲಿ ಸಂಪುಟ ಪುನರ್ ರಚನೆಯಾಗುವ ಸಾಧ್ಯತೆ ಇದೆ. ಅಧಿವೇಶನಕ್ಕೆ ಮೊದಲು ಎಂಟಿಬಿ ನಾಗರಾಜ್, ಆರ್. ಶಂಕರ್, ಸಿ.ಪಿ. ಯೋಗೇಶ್ವರ್, ಅರವಿಂದ ಲಿಂಬಾವಳಿ ಸಂಪುಟಕ್ಕೆ ಸೇರ್ಪಡೆಯಾಗಬಹುದು ಎಂದು ಹೇಳಲಾಗಿದೆ.