ನವದೆಹಲಿ: ಕೊರೊನಾ ಸೋಂಕು ತಡೆಗೆ ಲಸಿಕೆ ಕಂಡು ಹಿಡಿಯುವ ಪ್ರಯೋಗಗಳು ಅಂತಿಮ ಹಂತದಲ್ಲಿದ್ದು, ಶೀಘ್ರವೇ ಲಸಿಕೆ ಲಭ್ಯವಾಗಲಿದೆ ಎಂದು ಹೇಳಲಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹರ್ಷವರ್ಧನ್ ಈ ಕುರಿತಾಗಿ ಮಾಹಿತಿ ನೀಡಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಕೊರೊನಾ ಸೋಂಕಿಗೆ ಮುಂದಿನ ವರ್ಷದ ಆರಂಭದಲ್ಲಿ ಲಸಿಕೆ ಸಿಗಲಿದೆ. ಆದರೆ, ಲಸಿಕೆ ಜನರೆಲ್ಲರಿಗೂ ತಲುಪಲು ಇನ್ನೂ ಹೆಚ್ಚಿನ ಸಮಯ ಬೇಕಿದೆ.
ಸಮರ್ಪಕ ರೀತಿಯಲ್ಲಿ ಸೋಂಕು ತಡೆಗೆ ಸರ್ಕಾರ ಕ್ರಮ ಕೈಗೊಂಡಿದ್ದು ಕೊರೊನಾ ಪರಿಸ್ಥಿತಿಯನ್ನು ನಿರ್ವಹಿಸಿದೆ ಎಂದು ಅವರು ಹೇಳಿದ್ದಾರೆ.