ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸದಾ ಒಂದಿಲ್ಲೊಂದು ಎಡವಟ್ಟುಗಳಿಂದಲೇ ಸುದ್ದಿಯಾಗುತ್ತಿರುತ್ತಾರೆ. ಇದೀಗ ಕ್ಯಾಲಿಫೋರ್ನಿಯಾ ಕಾಡ್ಗಿಚ್ಚಿನ ಬಗ್ಗೆ ಇದೇ ರೀತಿಯ ಹೇಳಿಕೆ ನೀಡಿದ್ದಾರೆ.
ಹೌದು, ಇಡೀ ಅಮೆರಿಕ ಕೊರೋನಾ ವಿರುದ್ಧ ಹೋರಾಡುತ್ತಿದ್ದರೆ, ಕ್ಯಾಲಿಫೋರ್ನಿಯಾ ಹಾಗೂ ಒರೆಗಾನ್ ರಾಜ್ಯಗಳು ಕಾಡ್ಗಿಚ್ಚಿನ ವಿರುದ್ಧ ಹೋರಾಡುತ್ತಿವೆ. ಜನರನ್ನು ಯಾವುದೇ ಕಾರಣಕ್ಕೂ ಮನೆಯಿಂದ ಆಚೆ ಬಾರದಂತೆ ಸೂಚನೆ ನೀಡಲಾಗಿದೆ.
ಆದರೆ ಕೆಲ ದಿನಗಳ ಹಿಂದೆ ಕ್ಯಾಲಿಫೋರ್ನಿಯಾಕ್ಕೆ ಭೇಟಿ ನೀಡಿದ್ದ ಟ್ರಂಪ್, ಅಲ್ಲಿನ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. ಈ ವೇಳೆ ನೈಸರ್ಗಿಕ ಸಂಪತ್ತು ರಕ್ಷಣೆ ಇಲಾಖೆಯ ಕಾರ್ಯದರ್ಶಿ ವಾಡೇ ಕ್ರಾಫೋಟ್, ಹವಾಮಾನ ಬದಲಾವಣೆಯಿಂದ ಈ ರೀತಿಯ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ಗಮನ ಹರಿಸದಿದ್ದರೆ ಮುಂದಿನ ದಿನದಲ್ಲಿ ಭಾರಿ ಸಮಸ್ಯೆಯಾಗಲಿದೆ ಎನ್ನುವ ಮಾತನ್ನು ಹೇಳಿದ್ದಾರೆ. ಆದರೆ ಇದಕ್ಕೆ ಪ್ರತಿಕ್ರಿಯಿಸಿರುವ ಟ್ರಂಪ್, ನೀವೇ ನೋಡುತ್ತಿರಿ, ಕೆಲವೇ ದಿನದಲ್ಲಿ ತಂಪಾಗಲಿದೆ ಎಂದಿದ್ದಾರೆ. ಇದರೊಂದಿಗೆ ಕಾಡ್ಗಿಚ್ಚಿಗೆ ಪ್ರಕೃತಿ ವಿಕೋಪ ಇಲಾಖೆಯನ್ನು ಮೂದಲಿಸಿದ್ದಾರೆ ಎನ್ನಲಾಗಿದೆ.
https://twitter.com/realamerica70/status/1304998722200371203?ref_src=twsrc%5Etfw%7Ctwcamp%5Etweetembed%7Ctwterm%5E1304998722200371203%7Ctwgr%5Eshare_3&ref_url=https%3A%2F%2Fwww.timesnownews.com%2Fthe-buzz%2Farticle%2Fit-will-start-getting-cooler-donald-trumps-bizarre-take-on-the-california-wildfires-baffles-netizens%2F653879