alex Certify ನಟಿ ರಾಗಿಣಿ ಹಾಗೂ ಸಂಜನಾಗೆ ಜೈಲು ಫಿಕ್ಸ್: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಟಿ ರಾಗಿಣಿ ಹಾಗೂ ಸಂಜನಾಗೆ ಜೈಲು ಫಿಕ್ಸ್: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾಣಿ ಹಾಗೂ ಶಿವಪ್ರಕಾಶ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.21ಕ್ಕೆ ಮುಂದೂಡಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ನಟಿ ರಾಗಿಣಿ, ಸಂಜನಾ ಹಾಗೂ ಶಿವಪ್ರಕಾಶ್ ಅವರ ನ್ಯಾಯಾಂಗ ಬಂಧನ ಅವಧಿ ಇಂದು ಮುಕ್ತಾಯವಾಗಿತ್ತು. ಈ ಹಿನ್ನಲೆಯಲ್ಲಿ 33ನೇ ಸೆಷನ್ಸ್ ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆಗೆ ಬಂದಿತ್ತು.

ಆದರೆ ಸಿಸಿಬಿ ಪರ ವಕೀಲರು ಇನ್ನು ಕೆಲ ಆರೋಪಿಗಳನ್ನು ವಿಚಾರಣೆ ನಡೆಸುವ ಬಾಕಿ ಇರುವುದರಿಂದ ಒಂದೇ ದಿನ ಎಲ್ಲರ ಜಾಮೀನು ಅರ್ಜಿ ವಿಚಾರಣೆ ನಡೆಸುವುದು ಸೂಕ್ತ ಹೀಗಾಗಿ ಇನ್ನೂ ಎರಡು ದಿನ ನ್ಯಾಯಾಂಗ ಬಂಧನ ಮುಂದುವರೆಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಕೋರ್ಟ್ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.21ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...