alex Certify ಡ್ರಗ್ಸ್ ದಂಧೆಯಲ್ಲಿ ಇಬ್ಬರು ಸ್ಟಾರ್ ನಟರು: ಸಂಬರಗಿ ಹೊಸ ಬಾಂಬ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡ್ರಗ್ಸ್ ದಂಧೆಯಲ್ಲಿ ಇಬ್ಬರು ಸ್ಟಾರ್ ನಟರು: ಸಂಬರಗಿ ಹೊಸ ಬಾಂಬ್

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಮಾಹಿತಿಗಳನ್ನು ಬಹಿರಂಗ ಪಡಿಸುತ್ತಿರುವ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಇದೀಗ ಹೊಸ ಬಾಂಬ್ ಸಿಡಿಸಿದ್ದು, ಸ್ಯಾಂಡಲ್ ವುಡ್ ನ ಇಬ್ಬರು ಸ್ಟಾರ್ ನಟರು ಕೂಡ ಈ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಂಬರಗಿ, ಡ್ರಗ್ಸ್ ದಂಧೆಯಲ್ಲಿ ಎಂಎಲ್ ಎ ಮಗ, ಡಾರ್ಕ್ ವೆಬ್ ಬಳಕೆ ಮತ್ತು ಮತ್ತಿಬ್ಬರು ನಟರ ವಿಚಾರಣೆ ಒಂದು ಸಣ್ಣ ಎಳೆಯಷ್ಟೇ. ಮುಂದಿನ ದಿನಗಳಲ್ಲಿ ಇಬ್ಬರು ದೊಡ್ಡ ನಟರ ಸಮೇತ ಇನ್ನಷ್ಟು ಜನರ ವಿವರ ಬಹಿರಂಗಪಡಿಸುತ್ತೇನೆ. ಡ್ರಗ್ಸ್ ಮುಕ್ತ ಭಾರತಕ್ಕಾಗಿ ಒಂದಾಗೋಣ ಎಂದಿದ್ದಾರೆ.

ಈಗಾಗಲೇ ಡ್ರಗ್ಸ್ ಪ್ರಕರಣ ಸಂಬಂಧ ಸಿಸಿಬಿ ಅಧಿಕಾರಿಗಳು ಹಲವು ನಟ-ನಟಿಯರನ್ನು ವಿಚಾರಣೆ ನಡೆಸಿದ್ದು, ಇದರ ಬೆನ್ನಲ್ಲೇ ಇಬ್ಬರು ದೊಡ್ಡ ಸ್ಟಾರ್ ನಟರು ಕೂಡ ಡ್ರಗ್ಸ್ ದಂಧೆಯಲ್ಲಿದ್ದಾರೆ ಎಂಬ ಸಂಬರಗಿ ಟ್ವೀಟ್ ಸಾಕಷ್ಟು ಕುತೂಹಲವನ್ನು ಮೂಡಿಸಿದೆ ಜೊತೆಗೆ ಆ ಸ್ಟಾರ್ ನಟರು ಯಾರಿರಬಹುದು ಎಂಬ ಪ್ರಶ್ನೆ ಮೂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...