ಇಂದಿನಿಂದ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಸರ್ಕಾರದ ವೈಫಲ್ಯಗಳ ವಿರುದ್ಧ ಮುಗಿಬೀಳಲು ಪ್ರತಿಪಕ್ಷಗಳು ಸಜ್ಜಾಗಿವೆ. ಅದರಲ್ಲೂ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಪಾಲನ್ನು ಪಡೆದುಕೊಳ್ಳಲು ವಿಫಲವಾಗಿರುವ ಕುರಿತು ಪರಿಣಾಮಕಾರಿಯಾಗಿ ವಿಷಯ ಮಂಡಿಸಲು ಕಾಂಗ್ರೆಸ್ ಸಿದ್ಧವಾಗಿದೆ.
ಇನ್ನು ಜೆಡಿಎಸ್ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ಸೇರಿ ಕೆಲವೊಂದು ಸುಗ್ರಿವಾಜ್ಞೆಗಳ ವಿರುದ್ಧ ಧ್ವನಿ ಎತ್ತಲು ಸಿದ್ಧತೆ ನಡೆಸಿದ್ದು, ಈಗಾಗಲೇ ತನ್ನ ಶಾಸಕರಿಗೆ ಈ ಕುರಿತು ಸೂಚನೆ ನೀಡಿದೆ. ಕೊರೊನಾ ನಡುವೆ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಹಜವಾಗಿಯೇ ಮಹತ್ವ ಪಡೆದುಕೊಂಡಿದೆ.
ಇನ್ನು ಆಡಳಿತ ಪಕ್ಷ ಬಿಜೆಪಿ ಸಹ ಪ್ರತಿಪಕ್ಷಗಳನ್ನು ಸಮರ್ಥವಾಗಿ ಎದುರಿಸಲು ಸಿದ್ಧತೆ ನಡೆಸಿಕೊಂಡಿದ್ದು, ಇದರ ಜೊತೆಗೆ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆ ಸೇರಿದಂತೆ ಪ್ರಮುಖ ವಿಧೇಯಕಗಳಿಗೆ ಒಪ್ಪಿಗೆ ಪಡೆದುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ನಡೆಸಿದೆ.