alex Certify ಕುಸಿದು ಬಿದ್ದ ಮೂರು ಅಂತಸ್ತಿನ ಕಟ್ಟಡ: 25ಕ್ಕೂ ಹೆಚ್ಚು ಜನ ಅವಶೇಷಗಳಡಿ ಸಿಲುಕಿರುವ ಶಂಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕುಸಿದು ಬಿದ್ದ ಮೂರು ಅಂತಸ್ತಿನ ಕಟ್ಟಡ: 25ಕ್ಕೂ ಹೆಚ್ಚು ಜನ ಅವಶೇಷಗಳಡಿ ಸಿಲುಕಿರುವ ಶಂಕೆ

ಮುಂಬೈ: ಮೂರು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ 10 ಜನರು ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿರುವ ಘಟನೆ ಮಹಾರಾಷ್ಟ್ರದ ಭಿವಾಂಡಿಯಲ್ಲಿ ನಡೆದಿದೆ.

ಇಂದು ಮುಂಜಾನೆ 3.40ರ ಸುಮಾರಿಗೆ ಈ ಅವಘಡ ಸಂಭವಿಸಿದ್ದು, ಭಿವಾಂಡಿಯ ಪಟೇಲ್ ಕಾಂಪೌಂಡ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಎನ್‍ಡಿಆರ್‍ಎಫ್ ತಂಡದಿಂದ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಅವಶೇಷಗಳಡಿಯಲ್ಲಿ ಸಿಲುಕಿದ್ದ ಪುಟ್ಟ ಮಗು ಸೇರಿದಂತೆ ಈವರೆಗೆ 20 ಜನರನ್ನು ರಕ್ಷಿಸಲಾಗಿದೆ.

ಇನ್ನೂ 25 ಜನರು ಕಟ್ಟಡದ ಅವಶೇಷಗಳಡಿ ಸಿಲುಕಿರುವ ಶಂಕೆಯಿದೆ. 30 ವರ್ಷ ಹಳೆಯದಾದ ಈ ಕಟ್ಟಡದಲ್ಲಿ ಸುಮಾರು 20 ಕುಟುಂಬಗಳು ವಾಸವಾಗಿದ್ದವು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...