ತೂಗುದೀಪ ಶ್ರೀನಿವಾಸ್ ಅವರ ಪುತ್ರ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಸಹೋದರ ದಿನಕರ್ ತೂಗುದೀಪ, ಇಂದು 42ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.
ದಿನಕರ್ ತೂಗುದೀಪ ಸಾಕಷ್ಟು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಸಹೋದರ ದರ್ಶನ್ ಅವರ ‘ಚಕ್ರವರ್ತಿ’ ಸಿನಿಮಾದಲ್ಲಿ ವಿಲನ್ ಆಗಿ ನಟಿಸಿದ್ದಾರೆ ದಿನಕರ್.
ದರ್ಶನ್ ಅವರ ಸೂಪರ್ ಹಿಟ್ ‘ಸಾರಥಿ’ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ದಿನಕರ್ ತೂಗುದೀಪ 1978 ಸೆಪ್ಟೆಂಬರ್ 21 ರಂದು ಜನಿಸಿದ್ದು ಇಂದು ತಮ್ಮ ಜನ್ಮದಿನದ ಸಂಭ್ರಮದಲ್ಲಿದ್ದಾರೆ.