‘ಕಾಲೇಜು’ ಆರಂಭದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮಹತ್ವದ ಸುದ್ದಿ 23-09-2020 6:45AM IST / No Comments / Posted In: Latest News, India ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ, ಮಾರ್ಚ್ ತಿಂಗಳಿನಲ್ಲಿ ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ಅಂದಿನಿಂದಲೂ ಶಾಲಾ – ಕಾಲೇಜುಗಳು ಬಂದ್ ಆಗಿವೆ. ಇದೀಗ ಲಾಕ್ಡೌನ್ ಸಡಿಲಿಕೆಗೊಂಡು ಇತರೆಲ್ಲ ಚಟುವಟಿಕೆಗಳು ಆರಂಭವಾಗಿದ್ದರೂ ಸಹ ಶಾಲಾ – ಕಾಲೇಜುಗಳ ಆರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ತೋರಿಸಿರಲಿಲ್ಲ. ಈ ಮೊದಲು ಸೆಪ್ಟೆಂಬರ್ 21 ರಿಂದ ಶಾಲಾ – ಕಾಲೇಜುಗಳನ್ನು ಆರಂಭಿಸಿ 9 ರಿಂದ 12 ನೇ ತರಗತಿವರೆಗಿನ ಮಕ್ಕಳು ತಮ್ಮ ಶಿಕ್ಷಕರ ಬಳಿ ತೆರಳಿ ಪಠ್ಯಗಳ ಕುರಿತ ಅನುಮಾನಗಳನ್ನು ಪರಿಹರಿಸಿಕೊಳ್ಳುವುದಕ್ಕೆ ಅನುವು ಮಾಡಿಕೊಡಲಾಗಿದ್ದು, ಇದೀಗ ಪದವಿ ಮತ್ತು ಸ್ನಾತಕೋತ್ತರ ಪದವಿ ಮೊದಲ ವರ್ಷದ ಕೋರ್ಸ್ ಆರಂಭಿಸುವ ಕುರಿತು ಮತ್ತೊಂದು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ ಈ ಕುರಿತು ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಿದ್ದು, ಪ್ರವೇಶಾತಿ ಪ್ರಕ್ರಿಯೆಯನ್ನು ಅಕ್ಟೋಬರ್ 31 ರೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದೆ. ನವೆಂಬರ್ 1ರಿಂದ ಮೊದಲ ವರ್ಷದ ಕೋರ್ಸ್ ಆರಂಭಿಸಲು ತಿಳಿಸಲಾಗಿದ್ದು, ಈ ಕುರಿತು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. In view of the COVID-19 pandemic, the Commission has accepted the Report of the Committee and approved the @ugc_india Guidelines on Academic Calendar for the First Year of Under-Graduate and Post-Graduate Students of the Universities for the Session 2020-21. Suggested calendar👇 pic.twitter.com/JPYNhiWb0k — Dr. Ramesh Pokhriyal Nishank ( Modi Ka Parivar) (@DrRPNishank) September 22, 2020