ಔಷಧ ಅಂಗಡಿ, ಆಸ್ಪತ್ರೆ, ಅಂಬುಲೆನ್ಸ್ ಸೇವೆ, ಹಾಲು ಎಂದಿನಂತೆ ಲಭ್ಯವಾಗಲಿದೆ. ಪತ್ರಿಕೆಗಳು ಸಹ ವಿತರಣೆಯಾಗಲಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಗಳನ್ನು ಓಡಿಸಲು ಸರ್ಕಾರ ಮುಂದಾದರೂ ಪ್ರತಿಭಟನಾಕಾರರ ಆಕ್ರೋಶ ಹೆಚ್ಚಾದರೆ ಸ್ಥಗಿತಗೊಳ್ಳುವ ಸಾಧ್ಯತೆಯಿದೆ.
ಏನಿರಲ್ಲ…?
ಆಟೋ, ಲಾರಿ, ಟ್ಯಾಕ್ಸಿ ಸಂಚಾರ ಸ್ಥಗಿತಗೊಳ್ಳಲಿದೆ. ಅಂಗಡಿ-ಮುಂಗಟ್ಟುಗಳು ಸಂಪೂರ್ಣವಾಗಿ ಮುಚ್ಚುವ ಸಾಧ್ಯತೆಯಿದೆ. ಇನ್ನು ಖಾಸಗಿ ಬಸ್ ಮಾಲೀಕರ ಸಂಘದವರು ಬಂದ್ ಗೆ ನೈತಿಕ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಹೀಗಾಗಿ ಬಸ್ ಸೇವೆ ಎಂದಿನಂತೆ ಮುಂದುವೆರೆಯುವುದಾಗಿ ತಿಳಿಸಿದ್ದಾರೆ. ಒಂದೊಮ್ಮೆ ರೈತ ಸಂಘದವರು ಬಂದು ಬೆಂಬಲ ಕೇಳಿದರೆ ಆಗ ಬಸ್ ಸೇವೆ ಸ್ಥಗಿತಗೊಳಿಸುವ ಕುರಿತು ನಿರ್ಧರಿಸುವುದಾಗಿ ಹೇಳಿದ್ದಾರೆ.