ಬೆಂಗಳೂರು: ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿ ಪರಿಹಾರ ಪಡೆಯಲು ಸಾಧ್ಯವಾಗದ ಆಟೋ, ಟ್ಯಾಕ್ಸಿ ಚಾಲಕರಿಗೆ ಮತ್ತೊಮ್ಮೆ ಪರಿಹಾರ ಪಡೆಯಲು ಅವಕಾಶ ಕಲ್ಪಿಸಲು ಸರ್ಕಾರ ಮುಂದಾಗಿದೆ.
ಸಂಕಷ್ಟದಲ್ಲಿದ್ದ ಆಟೋ, ಟ್ಯಾಕ್ಸಿ ಚಾಲಕರಿಗೆ ಸರ್ಕಾರದಿಂದ 5 ಸಾವಿರ ರೂ. ಪರಿಹಾರ ಘೋಷಿಸಿದ್ದು, ಹೆಚ್ಚಿನವರಿಗೆ ಪರಿಹಾರ ಧನ ತಲುಪಿಲ್ಲ ಎಂಬ ದೂರು ಕೇಳಿ ಬಂದ ಹಿನ್ನಲೆಯಲ್ಲಿ ಅರ್ಹ ಫಲಾನುಭವಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.
ಸಲ್ಲಿಕೆಯಾದ 2.46 ಲಕ್ಷ ಅರ್ಜಿಗಳಲ್ಲಿ 2.14 ಲಕ್ಷ ಜನರಿಗೆ ಪರಿಹಾರ ನೀಡಲಾಗಿದೆ. ಅರ್ಜಿ ಸಲ್ಲಿಸಲು ಸಾಧ್ಯವಾಗದ ಅರ್ಹರಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಲಾಗುವುದು ಎಂದು ವಿಧಾನಸಭೆಯಲ್ಲಿ ಸಚಿವರು ಹೇಳಿದ್ದಾರೆ.