ಇಂದು ದುಬೈನಲ್ಲಿ ಐಪಿಎಲ್ ನ 7 ನೇ ಪಂದ್ಯ ನಡೆಯಲಿದ್ದು, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್‌ಕಿಂಗ್ಸ್ ಮುಖಾಮುಖಿಯಾಗಲಿದೆ.
ಎಮ್.ಎಸ್. ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಉದ್ಘಾಟನಾ ಪಂದ್ಯದಲ್ಲಿ ಜಯಭೇರಿ ಕಂಡು ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋಲು ಕಂಡಿತ್ತು.
ಎಂ.ಎಸ್. ಧೋನಿ 7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದು ಸಾಕಷ್ಟು ಚರ್ಚೆಗೆ ಕೂಡ ಕಾರಣವಾಗಿತ್ತು. ಇದೀಗ ಮತ್ತೆ ಗೆಲುವಿನ ಲಯಕ್ಕೆ ಬರುವ ನಿರೀಕ್ಷೆಯಲ್ಲಿದೆ.
ಶ್ರೇಯಸ್ ಅಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ ತನ್ನ ಮೊದಲನೇ ಪಂದ್ಯವನ್ನು ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಡ್ರಾ ಆದ ಪಂದ್ಯವನ್ನು ಸೂಪರ್ ಓವರ್ ನಲ್ಲಿ ಗೆಲ್ಲುವ ಮೂಲಕ ಜಯ ಸಾಧಿಸಿತ್ತು. ಇಂದು ಮತ್ತೊಂದು ಜಯ ಗಳಿಸಬೇಕೆಂಬ ಉತ್ಸಾಹದಲ್ಲಿದ್ದಾರೆ.