ಶುಕ್ರವಾರ ನಡೆದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಿದ್ದು, ಆರಂಭದಲ್ಲಿ ಶಿಖರ್ ಧವನ್ 35 ರನ್ ಗಳಿಸಿ ಔಟಾದರು. ನಂತರ ಉತ್ತಮ ಪ್ರದರ್ಶನ ತೋರಿದ ಪೃಥ್ವಿ ಶಾ 43 ಎಸೆತಗಳಲ್ಲಿ 64 ರನ್ ಗಳಿಸಿ ಔಟಾದರು. ನಂತರ ರಿಷಬ್ ಪಂತ್ ಹಾಗೂ ನಾಯಕ ಶ್ರೇಯಸ್ ಜೊತೆಯಾಟದಿಂದ ಡೆಲ್ಲಿ ಕ್ಯಾಪಿಟಲ್ಸ್ ಸುಧಾರಣೆ ಕಂಡಿತು. ಬಳಿಕ ಸ್ಯಾಮ್ ಕರನ್ ಬೌಲಿಂಗ್ ನಲ್ಲಿ ಶ್ರೇಯಸ್ ಅಯ್ಯರ್ ತಮ್ಮ ವಿಕೆಟ್ ಒಪ್ಪಿಸಿದರು. ರಿಷಬ್ ಪಂತ್ 37 ರನ್ ಗಳಿಸಿ ಅಜೇಯರಾಗಿ ಉಳಿದರು. ಒಟ್ಟಾರೆ ಡೆಲ್ಲಿ ಕ್ಯಾಪಿಟಲ್ಸ್ ತಂಡ 175 ರನ್ ಗಳ ಮೊತ್ತ ದಾಖಲಿಸಿತು.
ಗುರಿ ಬೆನ್ನತ್ತಿದ ಚೆನ್ನೈ ಸೂಪರ್ಕಿಂಗ್ಸ್ ತಂಡ ಆರಂಭದಲ್ಲಿ ಸ್ಪೋಟಕ ಬ್ಯಾಟ್ಸ್ಮನ್ ಶೇನ್ ವಾಟ್ಸನ್ 14 ರನ್ ಗಳಿಸಿ ಅಕ್ಸರ್ ಪಟೇಲ್ ಬೌಲಿಂಗ್ ನಲ್ಲಿ ಔಟಾದರು. ಆರಂಭಿಕ ಆಟಗಾರ ಮುರಳಿ ವಿಜಯ್ ಕೂಡ 10 ರನ್ ಗಳಿಸಿ ಔಟಾದರು. ನಂತರ ಕಣಕ್ಕಿಳಿದ ಪಾಫ್ ಡುಪ್ಲೆಸಿಸ್ ಚೆನ್ನೈ ಸೂಪರ್ಕಿಂಗ್ಸ್ ತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದರು. 43 ರನ್ ಗಳಿಸಿದ್ದ ಡುಪ್ಲೆಸಿಸ್ ರಬಾಡ ಬೌಲಿಂಗ್ ನಲ್ಲಿ ಔಟಾದರು. ಕೊನೆ ಹಂತದಲ್ಲಿ ಎಂ.ಎಸ್. ಧೋನಿ ಹಾಗೂ ರವೀಂದ್ರ ಜಡೇಜಾ ಗೆಲುವಿಗಾಗಿ ಹೋರಾಡಿದರೂ ಗುರಿ ತಲುಪಲು ಸಾಧ್ಯವಾಗಲಿಲ್ಲ. ಕೊನೆ ಓವರ್ ನಲ್ಲಿ ಇಬ್ಬರು ಔಟಾಗಿದ್ದು, ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ 44ರನ್ ಗಳ ಜಯ ಸಾಧಿಸಿತು.