ಇಂದು ಐಪಿಎಲ್ ನ 9ನೇ ಪಂದ್ಯ ಶಾರ್ಜಾದಲ್ಲಿ ನಡೆಯಲಿದ್ದು, ರಾಜಸ್ಥಾನ್ ರಾಯಲ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ಮುಖಾಮುಖಿಯಾಗಲಿದೆ.
ಸ್ಟೀವ್ ಸ್ಮಿತ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ತಮ್ಮ ಮೊದಲನೇ ಪಂದ್ಯದಲ್ಲಿ ಚೆನ್ನೈ ಸೂಪರ್‌ಕಿಂಗ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿತ್ತು. ಸಂಜು ಸ್ಯಾಮ್ಸನ್ ಮೊದಲನೇ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ಮಾಡಿದ್ದು ಇಂದಿನ ಪಂದ್ಯದಲ್ಲಿ ಮಿಂಚಲು ಸಜ್ಜಾಗಿದ್ದಾರೆ.
ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ತಮ್ಮ ಮೊದಲನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೂಪರ್ ಓವರ್ ನಲ್ಲಿ ಸೋಲನ್ನನುಭವಿಸಿತ್ತು ಎರಡನೇ ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ಗೆಲುವು ಸಾಧಿಸಿತ್ತು. ಈ ಪಂದ್ಯದಲ್ಲಿ ನಾಯಕ ಕೆಎಲ್ ರಾಹುಲ್ ಶತಕ ಗಳಿಸಿದ್ದರು. ಇಂದು ಎರಡು ತಂಡಗಳಿಂದ ಬಿಗ್ ಸ್ಕೋರ್ ಬರುವ ಸಾಧ್ಯತೆ ಹೆಚ್ಚಿದೆ.