alex Certify ರೈತರನ್ನು ಗುಲಾಮರನ್ನಾಗಿ ಮಾಡುವ ಕೃಷಿ ಕಾಯ್ದೆ ನಮಗೆ ಬೇಡ: ನಟ ಚೇತನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರನ್ನು ಗುಲಾಮರನ್ನಾಗಿ ಮಾಡುವ ಕೃಷಿ ಕಾಯ್ದೆ ನಮಗೆ ಬೇಡ: ನಟ ಚೇತನ್

ಬೆಂಗಳೂರು: ರೈತ ವಿರೋಧಿ ಮಸೂದೆಗಳನ್ನು ಖಂಡಿಸಿ ರೈತ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಗೆ ಸ್ಯಾಂಡಲ್ ವುಡ್ ನಟ ಚೇತನ್ ಬೆಂಬಲ ನೀಡಿದ್ದು, ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಬೆಂಗಳೂರಿನ ಸುಮನಹಳ್ಳಿಯಲ್ಲಿ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿರುವ ನಟ ಚೇತನ್, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಾರ್ಪೊರೇಟ್ ಕುಳಗಳಿಗೆ ರೈತರ ಭೂಮಿ ಮಾರಾಟ ಮಾಡುವ, ಅನ್ನದಾತನನ್ನು ಬೀದಿಯಲ್ಲಿ ನಿಲ್ಲಿಸುವ ಮಸೂದೆಗಳು ನಮಗೆ ಬೇಡ. ಉಳುವವನೇ ಒಡೆಯನಾಗಿರಬೇಕು ಎಂದರು.

ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ಮಸೂದೆಗಳನ್ನು ಜಾರಿ ಮಾಡುವ ಮೂಲಕ ರೈತರ ಮೇಲೆ ದಬ್ಬಾಳಿಕೆ ನಡೆಸಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಬಗ್ಗೆ ಕಾಳಜಿಯಿಲ್ಲ ಎಂಬುದನ್ನು ತೋರಿಸುತ್ತಿವೆ. ಸಮಾಜಕ್ಕೆ ಅನ್ನ ನೀಡುವ ರೈತನನ್ನು ಗುಲಾಮನನ್ನಾಗಿ ಮಾಡುವ ಈ ಕಾಯ್ದೆಗಳನ್ನು ಸರ್ಕಾರ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...