ಇಂದು ದುಬೈನಲ್ಲಿ ಐಪಿಎಲ್ ನ 10 ನೇ ಪಂದ್ಯ ನಡೆಯಲಿದ್ದು ವಿರಾಟ್ ಕೊಹ್ಲಿ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರೋಹಿತ್ ಶರ್ಮ ನಾಯಕತ್ವದ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತಮ್ಮ ಮೊದಲನೇ ಪಂದ್ಯದಲ್ಲಿ ಸನ್ರೈಸರ್ಸ್ ಹೈದ್ರಾಬಾದ್ ವಿರುದ್ಧ ಜಯ ಸಾಧಿಸಿತ್ತು ಎರಡನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಹೀನಾಯ ಸೋಲು ಅನುಭವಿಸಿತ್ತು. ಇಂದಿನ ಪಂದ್ಯದಲ್ಲಿ ಗೆಲ್ಲಬೇಕೆಂಬ ಉತ್ಸಾಹದಲ್ಲಿದ್ದಾರೆ.
ಮುಂಬೈ ಇಂಡಿಯನ್ಸ್ ತಂಡ ಮೊದಲ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋತು ನಂತರ ತಮ್ಮ ಎರಡನೇ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಭರ್ಜರಿ ಜಯ ಗಳಿಸಿತ್ತು. ಇಂದು ಉಭಯ ತಂಡಗಳ ನಡುವೆ ರೋಚಕ ಪಂದ್ಯ ನಡೆಯುವ ಸಾಧ್ಯತೆ ಇದೆ.