ಬೆಂಗಳೂರು: ರೈತರ ವಿರೋಧದ ನಡುವೆಯೂ ಕೃಷಿ ಸಂಬಂಧಿತ ತಿದ್ದುಪಡಿ ಕಾಯ್ದೆ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಧರಿಸಿದೆ.
ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಭೂ ಸುಧಾರಣಾ ತಿದ್ದುಪಡಿ, ಎಪಿಎಂಸಿ ತಿದ್ದುಪಡಿ ಹಾಗೂ ಕಾರ್ಮಿಕ ಕಾಯ್ದೆ ತಿದ್ದುಪಡಿ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ನಿರ್ಧಾರ ಕೈಗೊಳ್ಳಲಾಗಿದೆ.
ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಕಾರ್ಮಿಕ ತಿದ್ದುಪಡಿ ಮಸೂದೆ ಕಾಯ್ದೆಗೆ ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ.