ಗದಗ ಜಿಲ್ಲೆ ಗಜೇಂದ್ರಗಢದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆನ್ಲೈನ್ ಕ್ಲಾಸ್ ನೆಪದಲ್ಲಿ ಈತ ಮೊಬೈಲ್ ನಲ್ಲಿ ಗೇಮ್ ಆಡುತ್ತಿದ್ದು ಇದನ್ನು ಗಮನಿಸಿದ ಪೋಷಕರು ಬೈದು ಬುದ್ಧಿವಾದ ಹೇಳಿದ್ದಾರೆ.
ಇದರಿಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 17 ವರ್ಷದ ವಿದ್ಯಾರ್ಥಿ ಆನ್ಲೈನ್ ಕ್ಲಾಸ್ ನೆಪದಲ್ಲಿ ಹೆಚ್ಚಿನ ಸಮಯ ಮೊಬೈಲ್ನಲ್ಲಿ ಗೇಮ್ ಆಡುತ್ತಿದ್ದ. ಓದಿಕೊಳ್ಳುವಂತೆ ಪೋಷಕರು ಬುದ್ಧಿವಾದ ಹೇಳಿದ್ದರಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಗಜೇಂದ್ರಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.